2:23 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಐಫೋನ್, ಲ್ಯಾಪ್‌ಟಾಪ್ ಲಪಟಾಯಿಸಿ ಕಾರಿನೊಂದಿಗೆ ಪರಾರಿ; ಇಬ್ಬರ ಬಂಧನ

21/06/2026, 15:39

ಬೆಂಗಳೂರು(reporterkarnataka.com): ರೌಡಿ ಗ್ಯಾಂಗ್ ಒಂದು ಮನೆಗೆ ನುಗ್ಗಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಮನೆಯಲ್ಲಿದ್ದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಲ್ಲಿ ನಡೆದಿದೆ. ಇ-ಕಾಮರ್ಸ್ ಕಂಪೆನಿಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಡೀಲರ್ ಅಗಿರುವ ಯಾಸಿನ್ ಆಲಿ ಘಟನೆ ಕುರಿತು ದೂರು ನೀಡಿದ್ದಾರೆ.

ಯಾಸಿನ್ ಅಲಿ ಮನೆಗೆ ನುಗ್ಗಿದ ರೌಡಿಗಳು ದುಬಾರಿ ಬೆಲೆಯ ಸ್ಕೋಡಾ ಕಾರು, ಸ್ಕೂಟರ್, ನಾಲ್ಕು ಐಫೋನ್ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದಾರೆ. ಈ ರೌಂಡಿ ಗ್ಯಾಂಗ್‌ನಲ್ಲಿದ್ದ ಇಬ್ಬರನ್ನು ಬಂಧಿಸಲಾಗಿದೆ. 8 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.

*ರೌಡಿ ಶೀಟರ್ ರುಬೆನ್ ಪ್ರಮುಖ ಆರೋಪಿ:*
ಹಲ್ಲೆಗೊಳಗಾದ ಯಾಸೀನ್ ಅಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಂಧಿತ ಇಬ್ರಾಹಿಂ ಹಾಗೂ ವಿಜಯ್ ವಿಚಾರಣೆ ತೀವ್ರಗೊಂಡಿಜೆ. ಕೃತ್ಯದಲ್ಲಿ ಕೆ.ಜಿ.ಹಳ್ಳಿ ರೌಡಿಶೀಟರ್ ರುಬೇನ್ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ರುಬೇನ್ ಈಗಾಗಲೇ ಬೇರೆ ಪ್ರಕರಣವೊಂದರಲ್ಲಿ ಭಾರತಿನಗರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಸದ್ಯ ಬಾಡಿ ವಾರೆಂಟ್ ಅರ್ಜಿ ಸಲ್ಲಿಸಿ ರುಬೇನ್ ನನ್ನ ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಇ-ಕಾಮರ್ಸ್ ಕಂಪೆನಿಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಡೀಲರ್ ಅಗಿರುವ ದೂರುದಾರ ಯಾಸಿನ್, ಪತ್ನಿಯಿಂದ ದೂರವಾಗಿ ಶಾಂಪುರ ಬಳಿ ಪ್ರತ್ಯೇಕವಾಗಿ ವಾಸವಿದ್ದಾರೆ. ದೂರುದಾರ ಯಾಸಿನ್ ಪತ್ನಿಯು ಬಟ್ಟೆ ವ್ಯಾಪಾರ ಮಾಡುತ್ತಿದ್ದಾರೆ. ಪತ್ನಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೋಸಿನ್ ಹಾಗೂ ಪುಡಿ ರೌಡಿಗಳು ಯಾಸಿನ್ ಮನೆಗೆ ನುಗ್ಗಿ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ. ರೌಡಿಶೀಟರ್ ರುಬೆನ್ ನೊಂದಿಗೆ ಜೂ.5ರಂದು ಮನೆಗೆ ಬಂದಿದ್ದ ಮೋಸಿನ್, ಸಹಚರರಾದ ವಿಜಯ್, ಇಬ್ರಾಹಿಂ, ಆರ್ಷದ್ ನಿಂದ ಮನೆಗೆ ಬಂದು ಲಾಂಗ್ ನಿಂದ ಹಲ್ಲೆ ನಡೆಸಿದ್ದಾರೆ.
ಮನೆಯಲ್ಲಿದ್ದ ನಾಲ್ಕು ಮೊಬೈಲ್, ಲ್ಯಾಪ್ ಟಾಪ್, ಆಯಪಲ್ ವಾಚ್, ಪಾರ್ಕ್ ಮಾಡಿದ್ದ ಸ್ಕೋಡಾ ಕಾರ್, ಎಲೆಕ್ಟ್ರಿಕಲ್ ಬೈಕ್ ಹಾಗೂ 80 ಸಾವಿರ ಕಸಿದು ಪರಾರಿಯಾಗಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಸಿಸಿಬಿ ಪೊಲೀಸರಿಂದ ವಿಚಾರಣೆ ಆರೆಂಭಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು