ಇತ್ತೀಚಿನ ಸುದ್ದಿ
ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ
09/11/2025, 10:00
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnata@gmail.com
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ.

ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದವರು. ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ.
ಗಂಭೀರ ಗಾಯಗೊಂಡ ಚಾಲಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














