12:25 AM Wednesday4 - December 2024
ಬ್ರೇಕಿಂಗ್ ನ್ಯೂಸ್
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ… ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್… ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ…

ಇತ್ತೀಚಿನ ಸುದ್ದಿ

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ

14/08/2024, 20:23

ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂತರವಾಗಿ ನಡೆಯಬೇಕು. ಹೊಟ್ಟೆಯ ಹಸಿವಿನ ಜೊತೆಗೆ ಅಧ್ಯಾತ್ಮದ ಹಸಿವು ಹೆಚ್ಚಾಗಬೇಕು. ಸಹಕಾರ , ಉಪಕಾರ ಸ್ಮರಣೆ, ಅನುಭೂತಿ ಪ್ರತಿಯೊಬ್ಬನಲ್ಲಿಯೂ ಇರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ಸಮಾರೋಪದ ಅಂಗವಾಗಿ 48 ದಿನಗಳ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ, ಬಾಲಭೋಜನ ಕಾಯಕ್ರಮದಲ್ಲಿ ಆಶೀರ್ವಚನ ನೀಡಿದರು.


ದ.ಕ. ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಶಿಕ್ಷಕ ಯತಿರಾಜ , ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಆನಂದ ಶೆಟ್ಟಿ, ಸೋಮೇಶ್ವರ ಪರಿಜ್ಞಾನ ಕಾಲೇಜು ಉಪನ್ಯಾಸಕಿ ಸುಶ್ಮಾ ರಾಕೇಶ್ ಮಂಗಳೂರು, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ. ಶೆಟ್ಟಿ , ಶ್ರೀಧಾಮ ಮಿತ್ರಮಂಡಳಿಯ ಕಾರ್ಯದರ್ಶಿ ಜಗನ್ನಾಥ ಉಪಸ್ಥಿತರಿದ್ದರು.
ರಾಕೇಶ್ ಕೆ.ಪಿ. ಮಾಣಿಲ ನಿರೂಪಿಸಿದರು. ದೇವದಾಸ ಮಂಜೇಶ್ವರ ವಂದಿಸಿದರು. ರೇಖಾ ಎಸ್. ಕಾಮತ್ ಕುಟುಂಬದವರು ಗುರುದಕ್ಷಿಣೆ ಸಮರ್ಪಿಸಿದರು. ಶ್ರೀಗಳ ನೇತೃತ್ವದಲ್ಲಿ ಗಣಪತಿ ಹವನ, ಶ್ರೀ ಗುರುಪೂಜೆ ಶ್ರೀ ನಾಗದೇವರ ಪೂಜೆ , ಗೋಮಾತಾ ಪೂಜೆ, ಬಾಲಭೋಜನ, ಯಜ್ಞಯಾಗಾದಿಗಳು , ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ , ವಿಷ್ಣು ಸಹಸ್ರನಾಮ, ದುರ್ಗಾಪೂಜೆ , ಆಶ್ಲೇಷ ಬಲಿ, ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು