12:37 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉಚ್ಚಿಲದಲ್ಲಿ ನಿರಂತರ ರಸ್ತೆ ಅಪಘಾತ: ಅವೈಜ್ಞಾನಿಕ ಕಾಮಗಾರಿ ಎಂದು ಆರೋಪಿಸಿ ಹೆದ್ದಾರಿ ತಡೆದು ಪ್ರತಿಭಟನೆ

21/01/2025, 21:34

ಉಡುಪಿ(reporterkarnataka.com): ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವುದಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಚ್ಚಿಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯಕುಮಾರ್ ಸೊರಕೆ, ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಜ್ ಉಚ್ಚಿಲ ಸಹಿತ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದರು. ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ನಿಲ್ಲಿಸಿ ಮನವಿ ಸಲ್ಲಿಸಲಾಯಿತು.
ಸ್ಥಳಕ್ಕೆ ಬಂದ ಹೆದ್ದಾರಿ ಪ್ರಾಧಿಕಾರದ ಪ್ರಾದಿಕಾರದ ಯೋಜನಾಧಿಕಾರಿ ಜಾವೇದ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಕೂಡಲೇ ಸಮಸ್ಯೆಗೆ ಪರಿಹರಿಸದಿದ್ದಲ್ಲಿ ಮುಂದೆ ಇನ್ನಷ್ಟು ಉಗ್ರರೀತಿಯ ಪ್ರತಿಭಟನೆ ಎದುರಿಸಬೆಕಾದೀತು ಎಂದು ಎಚ್ಚರಿಸಿದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಪ್ರತಿಭಟನಾಕಾರ ರನ್ನು ಸಮಾಧಾನಪಡಿಸಿ ಶೀಘ್ರದಲ್ಲೇ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹೆದ್ದಾರಿ ಸುರಕ್ಷತಾ ಸಭೆಯನ್ನು ಕರೆದು ಇಲ್ಲಿನ ಸಮಸ್ಯೆಗಳ ಪರಿಹರಿಸ ಲಾಗುವುದು ಎಂದು ಹೇಳಿದರು.
ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್ ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಝೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂಬ ಬೇಡಿಕೆ ಇದೆ.
ಪ್ರತಿಭಟನಾ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿಕ ಹೋರಾಗಾರ ಶೇಖರ್ ಹೆಜಮಾಡಿ, ಎಂ.ಎ ಗಫುರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು