ಇತ್ತೀಚಿನ ಸುದ್ದಿ
ಉದಯಗಿರಿ ಕಲ್ಲು ತೂರಾಟ: 7 ಮಂದಿ ಪೊಲೀಸರಿಗೆ ಗಾಯ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವ ಡಾ. ಪರಮೇಶ್ವರ್
11/02/2025, 19:21
![](https://reporterkarnataka.com/wp-content/uploads/2025/02/IMG-20250211-WA0031.jpg)
ಮೈಸೂರು(reporterkarnataka.com): ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದ ಕಲ್ಲು ತೂರಾಟದಲ್ಲಿ 7 ಮಂದಿ ಪೊಲೀಸರು ಗಾಯಗೊಂಡಿದ್ಸು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಗಲಭೆಯಲ್ಲಿ 7 ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಎಡಿಜಿಪಿ ಹಿತೇಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಗಲಭೆಗೆ ಬಿಜೆಪಿ- ಆರೆಸ್ಸೆಸ್ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಮಧ್ಯೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು, ಕಾಂಗ್ರೆಸ್ ಸರಕಾರ ಮತಾಂಧ ಮುಸ್ಲಿಮರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಂಡಿರುವುದು ಪೊಲೀಸರ ಮೇಲೆ ದಾಳಿ ನಡೆಯಲು ಕಾರಣ ಎಂದು ಆರೋಪಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಒಳಗೊಂಡಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್ ಕಾಣಿಸಿಕೊಂಡ ನಂತರ ಮೈಸೂರು ಜಿಲ್ಲೆಯ ಉದಯಗಿರಿ ಠಾಣಾ ವ್ಯಾಪ್ತಿಯ ಪ್ರದೇಶವು ಉದ್ವಿಗ್ನತೆ ಸಾಕ್ಷಿಯಾಯಿತು.
ಕಾಂಗ್ರೆಸ್ ನಾಯಕ
ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರ ಚಿತ್ರಗಳನ್ನು ಆಕ್ಷೇಪಾರ್ಹ ರೀತಿಯಲ್ಲಿ ಮಾರ್ಫಿಂಗ್ ಮಾಡಿದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಕಾಣಿಕೊಂಡ ನಂತರ ಉದ್ವಿಗ್ನತೆ ಉಂಟಾಗಿದೆ, ಜೊತೆಗೆ ಅರೇಬಿಕ್ ಲಿಪಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಬರೆಯಲಾಗಿದೆ. ಪೋಸ್ಟ್ನಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರ ವಿರುದ್ಧ ಅಸಭ್ಯ ಟೀಕೆಗಳಿವೆ ಎಂದು ವರದಿಯಾಗಿದೆ,