7:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉದ್ದೀಪನ ಔಷಧ ಸೇವನೆ ಆರೋಪ: ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

20/09/2022, 15:29

ಹೊಸದಿಲ್ಲಿ(Reporterkarnataka.com):ಉದ್ದೀಪನ ಮದ್ದು ಸೇವನೆ ಹಿನ್ನೆಲೆಯ ಆರೋಪದ ಹಿನ್ನೆಲೆಯಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತೆ, ಹಿರಿಯ ಅಥ್ಲೇಟ್ ಎಂ. ಆರ್. ಪೂವಮ್ಮ ಅವರಿಗೆ 2 ವರ್ಷ ನಿಷೇಧ ಹೇರಲಾಗಿದೆ.

ಪಟಿಯಾಲದಲ್ಲಿ ಕಳೆದ ವರ್ಷ ಫೆಬ್ರವರಿ 18ರಂದು ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ 3 ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು