10:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಯುಡಿಎಫ್​​ ಕಮಾಲ್​: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಸ್ಟ್

04/05/2026, 18:30

ತಿರುವನಂತಪುರಂ(reporterkarnataka.com):ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಇದಾಗಿದ್ದು, ಆಡಳಿತಾರೂಢ ಕಮ್ಯುನಿಷ್ಟ್ ನೇತೃತ್ವದ ಎಲ್‌ಡಿಎಫ್ ಭಾರೀ ಹಿನ್ನಡೆ ಅನುಭವಿಸಿದೆ. ಈ ಮೂಲಕ ದೇಶದಲ್ಲಿ ಅಧಿಕಾರದಲ್ಲಿದ್ದ ಏಕೈಕ ಕಮ್ಯುನಿಸ್ಟ್ ಸರ್ಕಾರ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಯುಡಿಎಫ್​ಗೆ 10 ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಅವಕಾಶ ಸಿಕ್ಕಿದೆ.
140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇದನ್ನು ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಎಂದೇ ಪರಿಗಣಿಸಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಷ್ಟ್​​ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
2001ರ ವಿಧಾನಸಭಾ ಚುನಾವಣೆಯ ನಂತರದ ಯುಡಿಎಫ್​​ನ ಅತ್ಯುತ್ತಮ ಫಲಿತಾಂಶ ಇದಾಗಲಿದೆ. ಅಂದು ಯುಡಿಎಫ್ 99 ಸ್ಥಾನಗಳನ್ನು ಗೆದ್ದು ಇತಿಹಾಸ ನಿರ್ಮಿಸಿತ್ತು. ಇದೀಗ ಸಿಪಿಐ(ಎಂ) ನೇತೃತ್ವದ ಆಡಳಿತದಲ್ಲಿರುವ ಎಲ್‌ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್) ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಭಾರೀ ಸೋಲಿನತ್ತ ಸಾಗಿರೋದನ್ನು ಅಂಕಿ ಅಂಶಗಳು ಹೇಳುತ್ತಿವೆ. ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ನೇತೃತ್ವದಲ್ಲಿ ನಡೆದ ಪ್ರಚಾರದಲ್ಲಿ ಕಾಂಗ್ರೆಸ್ 100 ಸ್ಥಾನಗಳ ಗುರಿ ಹೊಂದಿದ್ದು, 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ದಿಸೆಯಲ್ಲಿ ಕೆಲಸ ಮಾಡಿತ್ತು. ಅದೀಗ ಫಲಕೊಟ್ಟಿರೋದು ಸ್ಪಷ್ಟವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಯುಡಿಎಫ್ ಉತ್ತಮ ಸಾಧನೆ ಮಾಡಿದ್ದು, ಎಲ್‌ಡಿಎಫ್‌ನ ಪರಂಪರೆಯ ಬಲಿಷ್ಠ ಕ್ಷೇತ್ರಗಳಲ್ಲೂ ಉತ್ತಮ ಮತಗಳನ್ನು ಪಡೆದಿದೆ ಎನ್ನುವುದು ಗಮನಾರ್ಹ.

ಇತ್ತೀಚಿನ ಸುದ್ದಿ

ಜಾಹೀರಾತು