5:30 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಉಡುಪಿ: 11ರಂದು ಕಸಾಪದಿಂದ ದತ್ತಿ ಉಪನ್ಯಾಸ; ದತ್ತಿ ಪುರಸ್ಕಾರ ಪ್ರದಾನ

09/11/2023, 21:47

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇದರ ಸಹಕಾರದಲ್ಲಿ ದಿ. ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11ರಂದು 10.30ಕ್ಕೆ ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ನಡೆಸಲಾಗುವುದು. ಉಪನ್ಯಾಸವನ್ನು ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಅನುಪಮಾ ಪ್ರಮೋದ್ ತಂತ್ರಿ ಅವರನ್ನು ಗೌರವಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು