ಇತ್ತೀಚಿನ ಸುದ್ದಿ
Udupi | ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ಬಿಗ್ಬಾಸ್ ಖ್ಯಾತಿಯ ನಟಿ ಅನುಷಾ ರೈ
26/11/2026, 22:23
ಕಾಪು(reporterkarnataka.com): ಬಿಗ್ಬಾಸ್ ಖ್ಯಾತಿಯ, ‘ಕರ್ನಾಟಕ ಕ್ರಶ್’ ಎಂದೇ ಜನಪ್ರಿಯತೆ ಪಡೆದಿರುವ ನಟಿ ಅನುಷಾ ರೈ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.













ಈ ಸಂದರ್ಭದಲ್ಲಿ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದ ಅವರು, ದೇವಸ್ಥಾನದ ವತಿಯಿಂದ ಆಯೋಜಿಸಲಾಗಿರುವ ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ ಎಂಬ ವಿಶಿಷ್ಟ ಧಾರ್ಮಿಕ ಅಭಿಯಾನದಲ್ಲಿ ಭಾಗವಹಿಸಿದರು. ನವದುರ್ಗಾ ಲೇಖನವನ್ನು ಭಕ್ತಿಭಾವದಿಂದ ಬರೆದು ಕಾಪುವಿನ ಅಮ್ಮನಿಗೆ ಅಕ್ಷರ ನಮನವನ್ನು ಸಲ್ಲಿಸಿದರು, ಮುಂದಿನ ಒಂದು ತಿಂಗಳ ಒಳಗಾಗಿ ಪುಸ್ತಕವನ್ನು ಬರೆದು ಶಾಶ್ವತ ಸೇವೆಯೊಂದಿಗೆ ಕ್ಷೇತ್ರಕ್ಕೆ ಸಮರ್ಪಿಸುತ್ತೇನೆ ಎಂದರು.
ಬಿಗ್ಬಾಸ್ ಕಾರ್ಯಕ್ರಮದ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಅನುಷಾ ರೈ ಅವರು, ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನದೊಂದಿಗೆ ನವದುರ್ಗಾ ಲೇಖನ ಯಜ್ಞದಲ್ಲಿಯೂ ಪಾಲ್ಗೊಂಡಿರುವುದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.












