9:30 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಉಡುಪಿ: ಅಗಲಿದ ಪತ್ರಕರ್ತರಾದ ಶೇಖರ್ ಅಜೆಕಾರ್, ಶಶಿಧರ್ ಹೆಮ್ಮಣ್ಣಗೆ ನುಡಿನಮನ

11/11/2023, 23:28

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬರಹದ ಹುಚ್ಚಿನ ದಾರಿಯ ಬದುಕು ಯಾವತ್ತೂ ಸುಲಭ ಅಲ್ಲ. ಬಹಳ ಸವಾಲು, ಸಂಕಷ್ಟ ಎದುರಿಸಿಯೇ ಮುಂದೆ ಹೆಜ್ಜೆ ಇಡಬೇಕಾಗುತ್ತದೆ. ಪತ್ರಕರ್ತರು ಸವಾಲುಗಳನ್ನು ಒಡ್ಡಿ ಸಮಾಜದ ಮುಂದೆ ತಮ್ಮನ್ನು ಗುರುತಿಸಿ ಕೊಳ್ಳುತ್ತಾರೆ. ಹಾಗಾಗಿ ಬರಹದ ಹುಚ್ಚಿನಿಂದ ಪತ್ರಕರ್ತ ವ್ಯಕ್ತಿಯಾಗಿ ಬೆಳೆಯ ಬಹುದೇ ಹೊರತು ಆರ್ಥಿಕವಾಗಿ ಬೆಳೆಯುವುದು ಕಷ್ಟ ಎಂದು ಹೇಳಿದರು.
ಶೇಖರ್ ಅಜೆಕಾರು ಸಾಮಾಜಿಕ ಬದುಕಿನಲ್ಲಿ ಆಳವಾದ ಅಧ್ಯಯನ ಮಾಡಿದ್ದಾರೆ. ಶಶಿಧರ್ ಹೆಮ್ಮಣ್ಣ ಅವರ ಬರವಣಿಗೆ ವಾಸ್ತವ್ಯ ಸ್ಥಿತಿಗೆ ಬಹಳಷ್ಟು ಹತ್ತಿರವಾಗಿರುತ್ತದೆ. ಇಬ್ಬರದ್ದು ಸಾಯುವ ವಯಸ್ಸು ಅಲ್ಲ. ಇನ್ನಷ್ಟು ವರ್ಷ ಬದುಕಲು ಬೇಕಾದ ಅವಕಾಶಗಳು ಇರುತ್ತಿತ್ತು. ಎಲ್ಲರ ಒಳಗೊಂಡ ಸಾಮಾಜ ಕಟ್ಟು ಅವರ ಕಲ್ಪನೆಗೆ ಇನ್ನಷ್ಟು ಶಕ್ತಿ ಬರುತ್ತಿತ್ತು ಎಂದರು.
ಉಡುಪಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಾಜಿ ಅಧ್ಯಕ್ಷ ಗೋಕುಲ್‌ದಾಸ್ ಪೈ, ಹಿರಿಯ ಉಪಸಂಪಾದಕ ಕರುಣಾಕರ್, ಪತ್ರಕರ್ತರಾದ ದೀಪಕ್ ಜೈನ್, ಶಶಿಧರ್ ಮಾಸ್ತಿಬೈಲು ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಉತ್ತರ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಶಿವಕುಮಾರ್, ಕೆಮ್ಮಣ್ಣು, ಗ್ರಾಪಂ ಕಾರ್ಯದರ್ಶಿ ದಿನಕರ ಬೆಂಗ್ರೆ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು