3:50 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಅಗ್ನಿಶಾಮಕದಳದ ಸಿಬ್ಬಂದಿಗಳ ಕಾರ್ಯಾಚರಣೆ

23/02/2022, 12:42

ಉಡುಪಿ(reporterkarnataka.com): 

ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸುಧಾಕರ್ ಹಗ್ಗದ ಸಹಾಯದಿಂದ ಬಾವಿಗಿಳಿದು, ಅಗ್ನಿಶಾಮಕದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೂರು ಕುರಿಗಳನ್ನು ರಕ್ಷಣೆ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಉಡುಪಿ ಜಿಲ್ಲಾ ಅಧಿಕಾರಿ ವಸಂತ್ ಕುಮಾರ್, ಠಾಣಾಧಿಕಾರಿ ಸತೀಶ್, ಸಹಾಯಕ ಠಾಣಾಧಿಕಾರಿ ಮೀರ್ ಮಹಮ್ಮದ್ ಗೌಸ್, ಲೀಡಿಂಗ್ ಫೈಯರ್ ಮ್ಯಾನ್ ಅಶ್ವಿನ್ ಸನಿಲ್, ಚಾಲಕ ಶಂಕರ್ ದಾಸ್, ಸಿಬ್ಬಂದಿಗಳಾದ ಉಮೇಶ್, ಸುಧಾಕರ್ ಹಾಗೂ ಹೋಮ್ ಗಾರ್ಡ್ ಅಕ್ಷಯ್ ಕುಮಾರ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು