4:37 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು