1:41 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ: ಬಸ್-ಸ್ಕೂಟರ್ ಮಧ್ಯೆ ಭೀಕರ ಅಪಘಾತ; ತಂದೆ- ಮಗಳು ದಾರುಣ ಸಾವು

02/03/2022, 15:46

ಉಡುಪಿ(reporterkarnataka.com): ಬಸ್ ಮತ್ತು ಸ್ಕೂಟರ್‌ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂತೆಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ.

ಮೃತರನ್ನು ಗರಡಿಮಜಲು ನಿವಾಸಿಗಳಾದ ಗಣೇಶ್‌ ಪೈ(58) ಮತ್ತು ಅವರ ಪುತ್ರಿ ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಗಣೇಶ್ ಅವರು ಹುಬ್ಬಳಿಯಿಂದ ಆಗಮಿಸಿದ್ದ ತನ್ನ ಮಗಳು ಗಾಯತ್ರಿ ಪೈ ಅವರನ್ನು ಕರೆದುಕೊಂಡು ಹೋಗಲು ಸ್ಕೂಟರ್‌ ನಲ್ಲಿ ಬಂದಿದ್ದರು. ಆಕೆಯನ್ನು ಕರೆದುಕೊಂಡು ಸಂತೆಕಟ್ಟೆ ಜಂಕ್ಷನ್‌ ಬಳಿ ರಸ್ತೆ ದಾಟುತ್ತಿದ್ದಾಗ ಕೇರಳದಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸ್ಕೂಟರ್ ಗೆಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್‌ ಪೈ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಣೇಶ್‌ ಪೈ ಕರಾವಳಿ ಕಾವಲು ಪಡೆಯಲ್ಲಿ ಎ ಎಸೈ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು