ಇತ್ತೀಚಿನ ಸುದ್ದಿ
ಉಡುಪಿ: ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ಧಾರಿಗಳಿಂದ ಹಲ್ಲೆ; ರಾಜಕೀಯ ವೈಷಮ್ಯವೇ? ವೈಯಕ್ತಿಕ ದ್ವೇಷವೇ?
02/02/2026, 18:53
ಉಡುಪಿ(reporterkarnataka.com): ಕೃಷ್ಣನಗರಿ ಉಡುಪಿ ಯಲ್ಲಿ ಮಚ್ಚು ಹಾಗೂ ಲಾಂಗು ಸದ್ದು ಮಾಡಿದ್ದು, ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ.
ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್ ಮಾಡಲಾಗಿದೆ. ಎನ್ ಎಸ್ ಯುಐ ಉಪಾಧ್ಯಕ್ಷ ಶರತ್ ಕುಂದರ್ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ.
ಮಣಿಪಾಲ ಹೋಟೆಲ್ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ.
ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ಘಟನೆ ಸಂಬಂಧ ತನಿಖೆ ಮುಂದುವರಿದಿದೆ. ರಾಜಕೀಯ ಕಾರಣವೂ ಒಳಗೊಂಡಂತೆ ವೈಯಕ್ತಿಕ ದ್ವೇಷಕ್ಕೆ ಅಟ್ಯಾಕ್ ನಡೆದಿದೆ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.












