12:02 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಉಡುಪಿ: ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರ್ ಧಾರಿಗಳಿಂದ ಹಲ್ಲೆ; ರಾಜಕೀಯ ವೈಷಮ್ಯವೇ? ವೈಯಕ್ತಿಕ ದ್ವೇಷವೇ?

02/02/2026, 18:53

ಉಡುಪಿ(reporterkarnataka.com): ಕೃಷ್ಣನಗರಿ ಉಡುಪಿ ಯಲ್ಲಿ ಮಚ್ಚು ಹಾಗೂ ಲಾಂಗು ಸದ್ದು ಮಾಡಿದ್ದು, ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ.
ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್​​ ಮಾಡಲಾಗಿದೆ. ಎನ್ ಎಸ್ ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ.
ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ.
ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ಘಟನೆ ಸಂಬಂಧ ತನಿಖೆ ಮುಂದುವರಿದಿದೆ. ರಾಜಕೀಯ ಕಾರಣವೂ ಒಳಗೊಂಡಂತೆ ವೈಯಕ್ತಿಕ ದ್ವೇಷಕ್ಕೆ ಅಟ್ಯಾಕ್ ನಡೆದಿದೆ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು