11:50 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 9 ಸಾವು, 28 ಕೋಟಿ ನಷ್ಟ: ಸಿಎಂ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

26/07/2023, 23:10

ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು