ಇತ್ತೀಚಿನ ಸುದ್ದಿ
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು
28/07/2023, 17:27
ಉಡುಪಿ(reporterkarnataka.com): ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ನಿಯರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ.
ಶಬನಾಜ್, ಆಲ್ಫಿಯಾ ಹಾಗೂ ಆಲಿಮತುಲ್ ಶಾಫಿ ಅವರು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದರು.