ಇತ್ತೀಚಿನ ಸುದ್ದಿ
ಉಡುಪಿ ಕೃಷ್ಣಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ: ಕನಕ ಕಿಂಡಿಯ ಮೂಲಕ ದೇವರ ದರ್ಶನ
14/05/2022, 17:12

ಉಡುಪಿ(reporterkarnataka.com):
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಅವರು ಕನಕನ ಕಿಂಡಿ ಮೂಲಕ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.