12:35 PM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಉಡುಪಿ: ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

09/10/2021, 08:55

ಉಡುಪಿ(reporterkarnataka.com): ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26 ಲಕ್ಷ ರೂ. ಸಹಾಯ ಧನದ ಚೆಕ್ ವಿತರಣಾ ಸಮಾರಂಭ ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು.

ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ ಈ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ. ತಮ್ಮ ಲಾಭದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸುತ್ತಿ ರುವುದು ಶ್ಲಾಘನೀಯ ಎಂದು ತಿಳಿಸಿದರು. 

ಪರ್ಕಳ ದೇವಿನಗರದ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಕೆ. ಅಬೂಬಕರ್ ಪರ್ಕಳ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿ ಕಾರ್ಯಕರ್ತೆ ವಿನುತಾ ಕಿರಣ್, ಸಮಾಜ ಸೇವಕ ವಿಲ್ಫ್ರೇಡ್ ಡಿಸೋಜ, ಕಿದಿಯೂರು ಉದಯ ಕುಮಾರ್ ಫ್ಯಾಮಿಲಿ ಟ್ರಸ್ಟ್‌ನ ಉದಯ ಕುಮಾರ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ, ಶಿಕ್ಷಕರಾದ ಮನು ಹಂದಾಡಿ, ಅರ್ಪಿತಾ ಶೆಟ್ಟಿ ಕಟಪಾಡಿ, ವಂದನಾ ರೈ ಕಾರ್ಕಳ, ನಿರ್ಮಲ್ ಕುಮಾರ್ ಹೆಗ್ಡೆ ಕಾಪು, ಚಿತ್ರ ಕಲಾವಿದ ಅಕ್ಷಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಉಪಸ್ಥಿತರಿದ್ದರು. ಆರ್.ಜೆ.ಎರಾಲ್ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು