7:59 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಉಡುಪಿ: ಆಕ್ಸಿಜನ್ ಪ್ಲಾಂಟ್, ಐಸಿಯು ನಿರ್ಮಾಣ ವಿಳಂಬ; ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಸುನಿಲ್ ಕುಮಾರ್ ಅಸಮಾಧಾನ

09/09/2021, 18:38

ಉಡುಪಿ(reporterkarnataka.com): ಅಮೃತ ಯೋಜನೆ ಹಾಗೂ ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಕೋವಿಡ್ ಸೋಂಕಿತರು, ಲಸಿಕೆ ವಿತರಣೆ, ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು. 

ಆಕ್ಸಿಜನ್ ಪ್ಲಾಂಟ್ ಹಾಗೂ ಐಸಿಯು ನಿರ್ಮಾಣ ವಿಳಂಬವಾಗಿರುವುದಕ್ಕೆ ಅಸಮಾಧಾನ ಸೂಚಿಸಿದ ಸಚಿವರು ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಸಚಿವರು ಸೂಚಿಸಿದರು. 

ಸಂಪೂರ್ಣ ಲಸಿಕೀಕರಣ ಕೈಗೊಂಡ ಕುಂದಾಪುರ ತಾಲೂಕಿನ 2 ಗ್ರಾಮ ಪಂಚಾಯಿತಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದರು. 

ಸಭೆಯಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ., ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಆರೋಗ್ಯ ಇಲಾಖೆಯ ಹಾಗೂ ಇತರೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು