5:16 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು