8:10 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಉಡುಪಿ: ರಸ್ತೆ ದಾಟುತ್ತಿದ್ದ 3 ಮಂದಿಗೆ ಕಾರು ಡಿಕ್ಕಿ: ಗರ್ಭಿಣಿ ಮಹಿಳೆಗೆ ತೀವ್ರ ಗಾಯ; ಸಿಸಿ ಕ್ಯಾಮೆರಾದಲ್ಲಿ ಸೆರೆ

04/02/2022, 20:48

ಉಡುಪಿ(reporterkarnataka.com): ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿ ತಾಲೂಕಿನ ಕಡಿಯಾಳಿ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಗುರುವಾರ ಸಂಜೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಓರ್ವ ಗರ್ಭಿಣಿ ಸಹಿತ ಮೂವರು‌ ರಸ್ತೆಯ ಎಡಭಾಗದಿಂದ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಕಡೆಗೆ ರಸ್ತೆ ದಾಟುತ್ತಿದ್ದರು.ಇದೇ ವೇಳೆ ಮಣಿಪಾಲದಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಇನೋವಾ ಕಾರು ಮೂವರಿಗೂ ಡಿಕ್ಕಿ‌ ಹೊಡೆದಿದೆ.

ಕಾರು ಡಿಕ್ಕಿಯಾದ ರಭಸಕ್ಕೆ ಮೂವರು ರಸ್ತೆಗೆ ಬಿದ್ದಿದ್ದು, ಗರ್ಭಿಣಿ ಮಹಿಳೆಯ ತಲೆಗೆ ತೀವ್ರತರದ ಗಾಯವಾಗಿದೆ ಎಂದು‌ ತಿಳಿದುಬಂದಿದೆ. ಅಪಘಾತದ ದೃಶ್ಯಾವಳಿ ಅಲ್ಲೇ ಪಕ್ಕದ ಶೋರೂಮ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು