3:12 AM Tuesday6 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಉಡುಪಿ ಸಂತೆಕಟ್ಟೆಯಲ್ಲಿ ಅಂಗಡಿಗಳಿಗೆ ದಾಳಿ: 81 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ; ದಂಡ ವಸೂಲಿ

09/11/2023, 21:40

ಉಡುಪಿ(reporterkarnataka.com): ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.
ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು