7:14 PM Monday8 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ಉಡುಪಿ: ಸೂರ್ಯಾಘಾತಕ್ಕೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು; ಕರಾವಳಿಯಲ್ಲಿ ತಗ್ಗದ ತಾಪಮಾನ

02/05/2024, 17:54

ಉಡುಪಿ(reporterkarnataka.com): ಬಿಸಿಲಿನ ತಾಪ ತಾಳಲಾರದೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಬುಧವಾರ ನಡೆದಿದೆ.
ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ.
ವಿಪರೀತ ಸೆಕೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೂ ಅವರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು