5:38 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಉಡುಪಿ ಉಚ್ಚಿಲ: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಸುವರ್ಣರಿಗೆ ‘ಯಶೋಭಿನಂದನ’

01/02/2023, 20:16

ಉಡುಪಿ(reporterkarnataka.com): ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್ ಪಾಲ್ ಸುವರ್ಣ ಅವರಿಗೆ ಯಶೋಭಿನಂದನ ಕಾರ್ಯಕ್ರಮ ಬುಧವಾರ ಉಚ್ಚಿಲದಲ್ಲಿ ಆಯೋಜಿಸಲಾಯಿತು.

ಆನೆಗುಂದಿ ಮಠದ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ. ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ರಘುಪತಿ ಭಟ್, ಉಚ್ಚಿಲ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ದಿ. ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶಟ್ಟಿ ಕಿದಿಯೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಗುರ್ಮೆ ಫೌಂಡೇಶನ್‌ನ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಉದ್ಯಮಿಗಳಾದ ಮನೋಹರ್ ಎಸ್. ಶೆಟ್ಟಿ, ಜರ್ರಿ ವಿನ್ಸೆಂಟ್ ಡಯಾಸ್, ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಸಾಧು ಸಾಲ್ಯಾನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ, ದೇವಾಡಿಗರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಬ್ರಹ್ಮಗಿರಿ, ಕಾಪು ಹಳೆಮಾರಿಯಮ್ಮ ದೇಗುಲದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ ಕಾಪು, ಕುಂಬಾರ ಮಹಾಸಂಘದ ರಾಜ್ಯಕಾರ್ಯಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ಕಚ್ಚೂರು ದೇಗುಲದ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ, ಮಾಲ್ದಿದೇವಿ ದೇಗುಲದ ಆಡಳಿತ ಮೊಕ್ತೇಸರ ಗೋಕುಲ್‌ದಾಸ್ ಕಚ್ಚೂರು, ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಉಮೇಶ್ ಎ. ನಾಯ್ಕ್ ಚೇರ್ಕಾಡಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು, ಕೆಎಫ್‌ಡಿಸಿ ನಿಕಟಪೂರ್ವಾಧ್ಯಕ್ಷ ನಿತಿನ್ ಕುಮಾರ್, ಉಚ್ಚಿಲ ಮಹಾಲಕ್ಷ್ಮೀ ದೇಗುಲದ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ದೇವಾನಂದ ಗುರಿಕಾರ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉಪಸ್ಥಿತರಿದ್ದರು.

ಸಹಕಾರರತ್ನ ಯಶ್ ಪಾಲ್ ಸುವರ್ಣ ಅಭಿನಂದನಾ ಸಮಿತಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು