5:46 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಜನವರಿಯಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ: ಸಚಿವ ಸುನಿಲ್ ಕುಮಾರ್

13/12/2022, 19:37

ಉಡುಪಿ(reporterkarnataka.com): ಜನವರಿ‌ ತಿಂಗಳಲ್ಲಿ‌ ಉಡುಪಿಯಲ್ಲಿ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
ಯಕ್ಷ ಶಿಕ್ಷಣ ಟ್ರಸ್ಟ್ ನ ವತಿಯಿಂದ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿಯೂ ಯಕ್ಷ ಶಿಕ್ಷಣ ಟ್ರಸ್ಟ್ ಜತೆಗೂಡಿ ಮಕ್ಕಳಿಗೆ ಯಕ್ಷಗಾನ ತರಬೇತಿ‌ ನೀಡುವ ಚಿಂತನೆ ಮಾಡಲಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಕ್ಷ ಶಿಕ್ಷಣ ಟ್ರಸ್ಟ್ ಗೆ 10ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ಮಾತನಾಡಿ, ಕಲೆಯನ್ನು ಬಲ್ಲವರು ಸುಸಂಸ್ಕೃತರಾಗುತ್ತಾರೆ. ಕಲೆ ಕಲಾವಿದರಿಗೆ, ಸಮಾಜಕ್ಕೆ ಉತ್ತಮ ಸಂಸ್ಕಾರ ನೀಡುತ್ತದೆ. ಯಕ್ಷಗಾನವೂ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುತ್ತದೆ ಎಂದರು.

ಈ ಸಂದರ್ಭದಲ್ಲಿ ಸಾಧಕ ಶಾಲೆ – ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು‌.ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬಿ. ವಿಜಯ ಬಲ್ಲಾಳ್, ಪಣಂಬೂರ್ ವಾಸುದೇವ ಐತಾಳ್, ಪುತ್ತೂರು ಪ್ರವೀಣ್ ಶೆಟ್ಟಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಹೆಚ್. ಚಂದ್ರೇಗೌಡ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್ ಕೆ, ಶಿಕ್ಷಣಾಧಿಕಾರಿ ಜಾಹ್ನವಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ ಗಂಗಾಧರ ರಾವ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಟ್ರಸ್ಟಿಗಳಾದ ಮೀನಾ ಲಕ್ಷ್ಮಣಿ ಅಡ್ಯಂತಾಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು