8:13 AM Wednesday3 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!!

27/07/2021, 22:50

ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ ಮಾತೃಪಕ್ಷವನ್ನು ತೊರೆದು ಬಂದವರಲ್ಲಿ ಇಬ್ಬರು ಮುಖ್ಯಮಂತ್ರಿ ಆದ್ದಂತಾಗಿದೆ. ಮೊದಲನೆಯದಾಗಿ ಸಿದ್ದರಾಮಯ್ಯ ಅವರು ಜನತಾ ಪರಿವಾರದಿಂದ ಹೊರ ಬಂದು ಕಾಂಗ್ರೆಸ್ ಸೇರಿದ ಬಳಿಕ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯಿತು. ಬಸವರಾಜ ಬೊಮ್ಮಾಯಿ ಅವರು ಕೂಡ ತನ್ನ ಮಾತೃಪಕ್ಷವಾದ ಜನತಾ ಪರಿವಾರದಿಂದ ಹೊರ ಬಂದು ಬಿಜೆಪಿ ಸೇರಿದ ಬಳಿಕ ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್ ಯಿಂದ ಹೊರಗಡೆ ಬಂದು 2013ರಲ್ಲಿ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾದರು. 2008ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಬಂದ ಬಸವರಾಜ ಬೊಮ್ಮಾಯಿ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಜನತಾ ಪರಿವಾರದಿಂದ ಬಂದ ಎಸ್. ಆರ್. ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಿಂದ ಹೊರ ಬಂದ ಬಳಿಕ ಅವರು ರಾಜಕೀಯವಾಗಿ ಆಯ್ಕೆ ಮಾಡಿಕೊಂಡಿರುವುದು ಬಿಜೆಪಿ ಪಕ್ಷವನ್ನು. ಯಡಿಯೂರಪ್ಪ ಅವರ ಮೊದಲ ಸರಕಾರದಲ್ಲಿಯೂ ಬೊಮ್ಮಾಯಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಜನತಾ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿತ್ತು. ಇದರ ವಿರುದ್ಧ ಸುಪ್ರೀಂಕೊರ್ಟ್ ಗೆ ಮೊರೆ ಹೋಗಲಾಗಿತ್ತು. ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿದ ಕೇಂದ್ರದ ಕ್ರಮ ಅಸಿಂಧು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅಷ್ಟೊತ್ತಿಗೆ ಬೇರೆ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು