12:56 AM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಉಡುಪಿ: ಮೀನುಗಾರರ ಬಲೆಗೆ ಬಿತ್ತು ಅಪರೂಪದ ಮೀನು !!; ಬರೋಬ್ಬರಿ 1.81 ಲಕ್ಷ  ರೂಪಾಯಿಗೆ ಮಾರಾಟ !

24/11/2021, 09:26

ಉಡುಪಿ(reporterkarnataka.com): ಮಲ್ಪೆ ಬಂದರಿನಿಂದ ಹೊರಟ ಮೀನುಗಾರರು ಭರ್ಜರಿ ಬೇಟೆ ಮಾಡಿದ್ದಾರೆ. ಮೀನುಗಾರರ ಬಲೆಗೆ ಅಪರೂಪದ ಮೀನು ಬಿದ್ದಿದ್ದು, ಮೀನುಗಾರರು ಹಿಡಿದ ಈ ಮೀನು ಬರೋಬ್ಬರಿ ಒಂದು ಲಕ್ಷದ ಎಂಭತ್ತು ಸಾವಿರಕ್ಕೆ ಮಾರಾಟವಾಗಿದೆ.

ಹೌದು, ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬುವವರ ಬಲರಾಮ್ ಎಂಬ ಹೆಸರಿನ ಬೋಟ್‌ಗೆ ಅದೃಷ್ಟ ಲಕ್ಷ್ಮಿಯೇ ಖುಲಾಯಿಸಿದ್ದಾಳೆ. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ “ಗೋಳಿ” ಎನ್ನುವ ಮೀನು ಸಿಕ್ಕಿದ್ದು, ಈ ಮೀನು ಬರೋಬ್ಬರಿ 1,81,200 ರೂಪಾಯಿಗೆ ಮಾರಟವಾಗಿದೆ. 

ಈ ಗೋಳಿ ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿರುತ್ತದೆ. ಆದರೆ ಮೀನುಗಾರರ ಬಲೆಗೆ ಬೀಳೋದು ಬಲು ಅಪರೂಪವಾಗಿದೆ.

ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲ ಬಾರಿಯಾಗಿದೆ. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಲಭ್ಯವಾಗಿದ್ದು, ಪ್ರಥಮ ಬಾರಿಗೆ ಭಾರೀ ತೂಕದ ಮೀನು ಸಿಕ್ಕಿದೆ. ಅಲ್ಲದೆ, ಇಡೀ ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ  1,81,200 ರೂಪಾಯಿಗೆ ಮಾರಾಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು