ಇತ್ತೀಚಿನ ಸುದ್ದಿ
ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಶಿಕ್ಷೆಗೊಳಗಾದ ಪತ್ನಿ, ಪುತ್ರನಿಂದ ಹೈಕೋರ್ಟ್ ಗೆ ಮೇಲ್ಮನವಿ
13/07/2021, 19:18

ಉಡುಪಿ(reporterkarnataka news): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ ಶೆಟ್ಟಿ ಅವರು ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಉಡುಪಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್‌ಗೆ ಜೀವಿತಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಅವರು ಜೂನ್ 8 ರಂದು ತೀರ್ಪು ನೀಡಿದ್ದರು.
ಆರೋಪಿಗಳು ಪರಪ್ಪನ ಆಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.