4:31 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಮತ್ತು ಜ್ಯೋತಿಷಿ ದೋಷಿಗಳು; ಕೋರ್ಟ್ ತೀರ್ಪು ಪ್ರಕಟ

08/06/2021, 13:26

ಉಡುಪಿ(reporterkarnataka news): ದಶಕಗಳ ಕಾಲ ಜತೆಯಾಗಿ ಸಂಸಾರ ನಡೆಸಿದ ಗಂಡನನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಅಮಾನುಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಗೆಳೆಯ ಜ್ಯೋತಿಷಿ ನಿರಂಜನ್ ಭಟ್ ದೋಷಿಗಳೆಂದು ನ್ಯಾಯಾಲಯ ಆದೇಶ ನೀಡಿದೆ.

ಉಡುಪಿಯ ಉದ್ಯಮಿ ಕೆ.ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣದಲ್ಲಿ ತಾಯಿ- ಮಗನ ಜತೆ ಸೇರಿದ ಜ್ಯೋತಿಷಿ ನಿರಂಜನ್ ಭಟ್ ವಿರುದ್ಧ ಕೊಲೆ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ತಿಳಿದೆ. ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು