11:42 AM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ 4 ಮಂದಿಗೆ ಜೀವಾವಧಿ ಶಿಕ್ಷೆ

04/04/2022, 13:13

ಬೆಳಗಾವಿ(reporterkarnataka.com): ಹಫ್ತಾಕ್ಕೆ ಬೇಡಿಕೆಗೆ ಒಪ್ಪದ ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ್  ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.

ಕೋಕಾ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಲಾಯಿತು. 3 ಕೋಟಿ ಹಫ್ತಾದ ಬೇಡಿಕೆಯನ್ನು ಇಡಲಾಗಿತ್ತು. ಆದರೆ ನಾಯಕ್ ಅವರು ಇದನ್ನು ಒಪ್ಪಲಿಲ್ಲ. ಈ ಕಾರಣಕ್ಕೆ ನಾಯಕ್ ಹತ್ಯೆ ನಡೆಯಿತು ಎಂದು ಆರೋಪಿಸಲಾಗಿತ್ತು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾದಲ್ಲಿ 2013ರ ಡಿಸೆಂಬರ್ 21 ರಂದು ಉದ್ಯಮಿ ನಾಯಕ್ ಹತ್ಯೆ ನಡೆದಿತ್ತು. ಸುಪಾರಿ ನೀಡಿ ಕೊಲೆ ಮಾಡಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬನ್ನಂಜೆ ರಾಜಾ ಸೇರಿ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.

ಪ್ರಕರಣದಲ್ಲಿ ಕ್ರಮವಾಗಿ 2,3 ಮತ್ತು 4ನೇ ಆರೋಪಿಗಳು ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಬೆಂಗಳೂರಿನ ಅಭಿ ಬಂಡಗಾರ್, ಉಡುಪಿಯ ಗಣೇಶ್ ಭಜಂತ್ರಿ ಆಗಿದ್ದಾರೆ. 9ನೇ ಆರೋಪಿಯಾಗಿರುವ ಉಡುಪಿಯ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು