4:12 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

UGC| ವಿವಿಗಳಲ್ಲಿ ಪ್ರಧಾನಿ ಮೋದಿ ಸೆಲ್ಫಿ ಪಾಯಿಂಟ್: ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಖಂಡನೆ

08/12/2023, 13:04

ಮಂಗಳೂರು(reporterkarnataka.com):ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿ ಪಾಯಿಂಟ್ ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ) ಸೂಚನೆ ನೀಡಿರುವುದನ್ನು ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಖಂಡನೆ ವ್ಯಕ್ತಪಡಿಸಿದ್ದಾರೆ.

ಯುಜಿಸಿಯು ಈ ತಾಣಗಳಲ್ಲಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಕ್ಯಾಂಪಸ್ ಅಧಿಕಾರಿಗಳನ್ನು ಹುರಿದುಂಬಿಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ. ಇದು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ತೊಂದರೆಯಾಗಲಿದ್ದು, ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುತ್ತದೆ.
ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆ ಗುರಿಯಾಗಿಸಿ ಕ್ಯಾಂಪಸ್ ಗಳಲ್ಲಿ ಇಂತಹ ಅಭಿಯಾನ ನಡೆಸಿ ಯುವ ವಿದ್ಯಾರ್ಥಿಗಳನ್ನು ತನ್ನೆಡೆಗೆ ಸೆಳೆಯುವ ಹುನ್ನಾರ ಮಾಡುತ್ತಿರುವುದು ವಿಷಾದನೀಯ. ಪಕ್ಷದ ಪರವಾಗಿ ಪ್ರಚಾರ ಮಾಡಲು ತನ್ನದೇ ಆದ ವೇದಿಕೆಯಿದೆ, ಅದು ಬಿಟ್ಟು ಇಂತಹ ಚಟುವಟಿಕೆಗಳನ್ನು ಕಾಲೇಜು ಕ್ಯಾಂಪಸ್ ಗಳಲ್ಲಿ ಆರಂಭಿಸುವುದು ಸರಿಯಲ್ಲ. ಆದ್ದರಿಂದ ಯುಜಿಸಿಯು ಒಂದು ಸ್ವಾಯತ್ತ ಸಂಸ್ಥೆಯಾಗಿ ಇಂಹತ ಹುಚ್ಚಾಟಗಳಿಗೆ ಶೈಕ್ಷಣಿಕ ವ್ಯವಸ್ಥೆಯನ್ನು ಬಲಿಕೊಡಬಾರದು. ವಿದ್ಯಾರ್ಥಿಗಳ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ತನ್ನ ಸೂಚನೆಯನ್ನು ಹಿಂಪಡೆದಿದ್ದಲ್ಲಿ ವಿದ್ಯರ್ಥಿ ಚಳವಳಿ ನಡೆಸುವುದಾಗಿ ಸವಾದ್ ಸುಳ್ಯ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು