4:28 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಪುತ್ರ

23/11/2023, 18:09

ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನಲ್ಲೇ ಬಾಲ್ಯ ಕಳೆದಿದ್ದರು.
ಪ್ರಾಂಜಲ್ ಅವರು ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್ ಅವರು ಪ್ರೈಮರಿ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಎಂಆರ್ ಪಿಎಲ್ ಬಳಿಯ ಪಬ್ಲಿಕ್ ಸ್ಕೂಲ್ ನಲ್ಲಿ ಪಡೆದಿದ್ದರು. ನಂತರ ಪಿಯು ಶಿಕ್ಷಣವನ್ನು ಮಂಗಳೂರಿನ ಮಹೇಶ್ ಕಾಲೇಜಿನಲ್ಲಿ ಪೂರೈಸಿದ್ದರು. ಇದಾದ ಬಳಿಕ ನ್ಯಾಪನಲ್ ಡಿಫೆನ್ಸ್ ಅಕಾಡೆಮಿಗೆ ಆಯ್ಕೆಗೊಂಡು ಅಲ್ಲಿ ಶಿಕ್ಷಣವನ್ನು ಪಡೆದರು. ಕಳೆದ ಎರಡು ವರ್ಷಗಳಿಂದ ಜಮ್ಮು- ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2 ವರ್ಷಗಳ ಹಿಂದೆ ಅದಿತಿ ಅವರ ಜತೆ ವಿವಾಹವಾಗಿದ್ದರು. ಪತ್ನಿ ಅದಿತಿ ಅವರು ಪಿಜಿ ಶಿಕ್ಷಣ ಪಡೆಯುತ್ತಿದ್ದಾರೆ.

ಕ್ಯಾ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಬನ್ನೇರಘಟ್ಟದಲ್ಲಿರುವ ವೆಂಕಟೇಶ್ ಅವರ ನಿವಾಸದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು