10:06 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು’ ವಿಷಯದ ಬಗ್ಗೆ ಆನ್ಲೈನ್ ಕಾರ್ಯಾಗಾರ

26/09/2021, 19:04

ಮಂಗಳೂರು(reporterkarnataka.com): ಉಜಿರೆ ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ  ಪ್ರಯುಕ್ತ  ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಾಗಾರವು ಇತ್ತೀಚೆಗೆ ಜರುಗಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ ರಾವ್ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಕಲಿಕೆ ಗುರಿ ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೆ ಪರಮ ಗುರಿಯಾಗಬೇಕು ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ  ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ  ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಲ್ಲಿ ಯೋಜನಾಧಿಕಾರಿಗಳ ಪರಿಶ್ರಮ ಕೂಡ ಗಮನಾರ್ಹ. ಅದಕ್ಕೆ ಉದಾಹರಣೆ  ಉಜಿರೆ ಎಸ್ ಡಿ.ಎಂ ಕಾಲೇಜಿನ ಸ್ವಯಂ ಸೇವಕ ಹೃತಿಕ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ವಿದ್ಯಾರ್ಥಿಗಳು ಎನ್ಎಸ್ಎಸ್ ನ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಿ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲ್ ಡಾ. ಸತೀಶ್ಚಂದ್ರ ಮಾತನಾಡಿ ಶಿಕ್ಷಣವನ್ನು ನಾಲ್ಕು  ಗೋಡೆಗಳ ಮಧ್ಯೆ  ಸೀಮಿತವಾಗಿಸದೆ. ಬಾಹ್ಯ ಪ್ರಪಂಚವನ್ನು ಪರಿಚಯಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನ,ಜ್ಞಾನ ಮತ್ತು ಕೌಶಲ್ಯವನ್ನು ತಿಳಿಸುವಂತಾಗಬೇಕು ಎಂದರು. 

ಯೋಜನಾಧಿಕಾರಿ ಡಾ. ಕೆ. ಎಸ್. ಲಕ್ಷ್ಮೀನಾರಾಯಣ ಸ್ವಾಗತಿಸಿದರು.  ದೀಪಾ. ಆರ್. ವಂದಿಸಿದರು. ಸ್ವಯಂ ಸೇವಕಿ ಜಯಶ್ರೀ ಅತಿಥಿಗಳನ್ನು ಪರಿಚಯಿಸಿ,  ವಸುಮತಿ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು