6:46 PM Friday10 - January 2025
ಬ್ರೇಕಿಂಗ್ ನ್ಯೂಸ್
ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2…

ಇತ್ತೀಚಿನ ಸುದ್ದಿ

ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ 

11/08/2021, 13:16

ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


ಭಜರಂಗ ದಳ ಹಿರಿಯ ನಾಯಕ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮಾಸ್ತಿಕಟ್ಟೆಯಲ್ಲಿರುವ ಬಾಷಾ ಅವರ ಮನೆಯ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. 


ಎನ್ ಐಎ ತಂಡ ಇತ್ತೀಚೆಗೆ  ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ದಾಳಿ ನಡೆಸಿತ್ತು. ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು