10:45 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಉಳ್ಳಾಲ: ಹಾಸನ ಮೂಲದ ಬೆಂಗಳೂರು ನಿವಾಸಿ ಯುವಕನ ಮೃತದೇಹ ತೊಕ್ಕೊಟ್ಟು ಬಾವಿಯಲ್ಲಿ ಪತ್ತೆ

05/12/2022, 14:31

ಉಳ್ಳಾಲ(reporterkarnataka.com):
ತೊಕ್ಕೊಟ್ಟು ಸಮೀಪದ ಬಾವಿಯೊಂದರಲ್ಲಿ ಬೆಂಗಳೂರು ಮೂಲದ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.

ಮೃತ ವ್ಯಕ್ತಿಯನ್ನು ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ, ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್‌ (36) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ತೊಕ್ಕೊಟ್ಟು ಬಂದಿದ್ದ ಮಹಾಂತೇಶ್ ರಾ.ಹೆ.66 ರಲ್ಲಿರುವ ಕಾಪಿಕಾಡಿನ ನಿರ್ವಿಕಲ್ಪ ಲಾಡ್ಜ್ ನಲ್ಲಿ ತಂಗಿದ್ದರು. ಅಂದು ರಾತ್ರಿ ಅಲ್ಲಿಂದ ತೆರಳಿದವರು ವಾಪಸ್ಸಾಗಿರಲಿಲ್ಲ.ಡಿ.1 ರಂದು ಸಂಜೆ ಲಾಡ್ಜ್ ರೂಮಿನ ಅವಧಿ ಮುಗಿದ ಹಿನ್ನೆಲೆ ರೂಮ್ ಬಾಯ್ ರೂಮಿಗೆ ಬಂದು ತಪಾಸಣೆ ನಡೆಸಿದಾಗ ಮಹಾಂತೇಶ್ ಇರಲಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ನ.2 ರಂದು ಬೆಂಗಳೂರಿನ ಮಹಾಂತೇಶ್ ಸಹೋದರಿ ಉಳ್ಳಾಲ ಠಾಣೆಯಲ್ಲಿ ಸಹೋದರ ನಾಪತ್ತೆ ಕುರಿತು ದೂರು ದಾಖಲಿಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಅಂಬಿಕಾ ರೋಡ್ ಹೆದ್ದಾರಿ ಅಂಚಿನಲ್ಲಿರುವ ಅಬ್ದುಲ್ ಸಮದ್ ಎಂಬವರ ಮನೆಯ ಹಿಂದಿನ ಬಾವಿಯಲ್ಲಿ ಮಹಂತೇಶ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಮದ್ ಮನೆ ಕೆಲಸದಾಕೆ ಸುಗಂಧಿ ಎಂಬವರು ಬಾವಿಯೊಳಗೆ ದುರ್ವಾಸನೆ ಬರುತ್ತಿರುವುದನ್ನ ಗ್ರಹಿಸಿ ಬಾವಿ ನೋಡಿದಾಗ ಅಪರಿಚಿತ ವ್ಯಕ್ತಿಯ ಶವ ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು