7:48 PM Sunday6 - October 2024
ಬ್ರೇಕಿಂಗ್ ನ್ಯೂಸ್
ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್: 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ… ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ…

ಇತ್ತೀಚಿನ ಸುದ್ದಿ

ಉಳ್ಳಾಲ ಖಾಝಿ ನಿಧನ: ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರ ಸಂತಾಪ

08/07/2024, 19:49

ಮಂಗಳೂರು(reporterkarnataka.com):ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅವರು ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸರ್ವಧರ್ಮಗಳ ಸೌಹಾರ್ದದ ಪ್ರತಿಪಾದಕರಾಗಿದ್ದ ಅವರ ನಿಧನವು ಕರಾವಳಿ ಭಾಗದ ಜನತೆಗೆ ಅಪಾರ ನಷ್ಟವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು, ಸಾಮರಸ್ಯಕ್ಕಾಗಿ ದುಡಿದ ಉಳ್ಳಾಲ ಖಾಝಿ ಸದಾ ಸಮಾಜದ ಸರ್ವರಿಗೂ ಒಳಿತು ಬಯಸುತ್ತಿದ್ದ ಹಿರಿಯ ಚೇತನವಾಗಿದ್ದರು.
ಮೃತರ ಅನುಯಾಯಿ ಗಳಿಗೆ ಭಗವಂತ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು