9:10 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು