6:45 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ

17/05/2022, 22:38

ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. 

ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.

ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು