10:29 PM Saturday5 - April 2025
ಬ್ರೇಕಿಂಗ್ ನ್ಯೂಸ್
Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ; ಜೈಲ್ ಜಾಮರ್ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್

05/04/2025, 21:14

ಮಂಗಳೂರು(reporterkarnataka.com): ನಗರದ ಬಿಜೈನಲ್ಲಿರುವ ಸಬ್ ಜೈಲ್ ನ ಜಾಮರ್ ಸಮಸ್ಯೆಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಜೈಲು ಮುಂಭಾಗ ರಾಸ್ತಾ ರೋಕೋ ಪ್ರತಿಭಟನೆ ನಡೆಯಿತು.


ಈ ವೇಳೆ ಆಕ್ರೋಶದಿಂದ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಒಂದೋ ಜಾಮರ್ ಸಮಸ್ಯೆ ಸರಿಪಡಿಸಿ. ಅಥವಾ ಅದನ್ನು ಕಿತ್ತೊಗೆಯಿರಿ, ಇಲ್ಲವೇ ನಾವೇ ತೆಗೆದು ಬಿಸಾಕುತ್ತೇವೆ ಎಂದು, ಜೈಲು ಅಧಿಕಾರಿಗಳಿಂದ ಹಿಡಿದು ಕಮಿಷನರ್, ಜಿಲ್ಲಾಧಿಕಾರಿ, ಕೊನೆಗೆ ಗೃಹ ಸಚಿವರಿಗೂ ಹೇಳಿ ಆಗಿದೆ. ಕಾಂಗ್ರೆಸ್ಸಿನ ಪರಿಷತ್ ಸದಸ್ಯರೊಬ್ಬರಂತೂ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ಕೊಟ್ಟರೂ ಸಮಸ್ಯೆ ಮಾತ್ರ ಹಾಗೆಯೇ ಇದ್ದು ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ ಸಿಗುತ್ತಿದೆ. ಜೈಲು ಅಧಿಕಾರಿಗಳು ಸರಿಯಾಗಿದ್ದರೆ ಜಾಮರ್ ಅವಶ್ಯಕತೆಯೇ ಬರುವುದಿಲ್ಲ. ವಿಪರ್ಯಾಸವೆಂದರೆ ಈಗಲೂ ಜೈಲಿನೊಳಗೆ ಮೊಬೈಲ್ ನೆಟ್ವರ್ಕ್ ಸಿಗುತ್ತಿದೆ. ಹೊರಗಿರುವ ಜನರಿಗೇ ಸಿಗುತ್ತಿಲ್ಲ. ಇವರ ಬೇಜವಾಬ್ದಾರಿಯಿಂದಾಗಿ ಇತ್ತೀಚೆಗೆ ರೋಗಿಯೊಬ್ಬರು ತುರ್ತು ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ನಡೆದಿದೆ. ಈ ಸಾವಿನ ಹೊಣೆ ಯಾರು ಹೊರುತ್ತಾರೆ? ಜೈಲು ಅಧಿಕಾರಿಗಳೇ? ಉಸ್ತುವಾರಿ ಸಚಿವರೇ? ಅಥವಾ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದರು.
ಆಕ್ರೋಶಿತ ಬಿಜೆಪಿ ಕಾರ್ಯಕರ್ತರು, ಜೈಲಿಗೆ ಹಾಕಲಾಗಿದ್ದ ಬ್ಯಾರಿಕೇಡ್ ನತ್ತ ನುಗ್ಗಿದಾಗ ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ನಡೆದ ತಳ್ಳಾಟದಲ್ಲಿ ಕಂಬ್ಳ ವಾರ್ಡಿನ ಬಿಜೆಪಿ ನಿಕಟಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್ ರವರು ಅಸ್ವಸ್ಥಗೊಂಡು ಕೆಎಂಸಿ ಜ್ಯೋತಿ ಆಸ್ಪತ್ರೆಗೆ ದಾಖಲಾದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರು, ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ಕಿಶೋರ್ ಕೊಟ್ಟಾರಿ, ಭಾನುಮತಿ, ಮನೋಹರ್ ಕದ್ರಿ, ಶಕೀಲಾ ಖಾವ, ಅಶ್ವಿತ್ ಕೊಟ್ಟಾರಿ ಸಹಿತ ಅನೇಕ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು