10:09 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಜ್ಞಾತ ಸ್ಥಳದಿಂದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೊ: ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ಕ್ಕೆ ಎಸ್ ಐಟಿ ಎದುರು ಹಾಜರು

27/05/2024, 21:35

ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೇ 31ಕ್ಕೆ ಬೆಂಗಳೂರಿಗೆ ಬಂದು ಎಸ್ ಐಟಿ ಎದುರು ಹಾಜರಾಗುವುದಾಗಿ ತಿಳಿಸಿದ್ದಾರೆ.
ತಂದೆ, ತಾಯಿ, ಕುಮಾರಣ್ಣ, ಹಾಸನದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಕ್ಷಮೆ ಕೇಳುತ್ತೇನೆ,
ತನ್ನ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಮೇ 31ರಂದು ಬೆಳಗ್ಗೆ 10 ಗಂಟೆಗೆ ಎಸ್ ಐಟಿ ಮುಂದೆ ಹಾಜರಾಗುತ್ತೇನೆ.
ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ.
ಸುಳ್ಳಿನ ಪ್ರಕರಣಗಳಿಂದ ಆಚೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ನನ್ನ ವಿರುದ್ದ ಷಡ್ಯಂತ್ರ ನಡೆದಿದೆ. ಇದನ್ನು ತಿಳಿದು ಬೇಸರಗೊಂಡು ದೂರವಾಗಿದ್ದೆ. ಮೇ 31ಕ್ಕೆ ಬರುತ್ತೇನೆ. ತಾತ, ತಂದೆ, ತಾಯಿ ಹಾಗೂ ಪಕ್ಷದ ಕಾರ್ಯಕರ್ತರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.
ನಾನು ವಿದೇಶಕ್ಕೆ ಹೋಗುವುದು ಮೊದಲೇ ನಿಗದಿಯಾಗಿತ್ತು.
ಪೂರ್ವನಿಗದಿ ಕಾರ್ಯಕ್ರಮದಂತೆ ವಿದೇಶಕ್ಕೆ ಹೋಗಿದ್ದೇನೆ. ಆಗ ನನ್ನ ಮೇಲೆ ಯಾವುದೇ ಪ್ರಕರಣ, ಕೇಸ್ ಆಗಲಿ ಇರಲಿಲ್ಲ. ಎಸ್ ಐಟಿ ರಚನೆಯೂ ಆಗಿರಲಿಲ್ಲ. ನಾನು ವಿದೇಶಕ್ಕೆ ಹೋದ ಬಳಿಕ ನ್ಯೂಸ್ ಚಾನೆಲ್ ಹಾಗೂ ಯೂಟ್ಯೂಬ್ ನೋಡಿದಾಗ ಈ ಮಾಹಿತಿ ಸಿಕ್ಕಿತು ಎಂದು ಹೇಳಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು