5:07 AM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಉಂಡು ಹೋದ ಕೊಂಡು ಹೋದ: ಉಚಿತ ಮನೆ ನೀಡಿದ ಮಾಲೀಕನ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ‌

16/10/2022, 10:48

ಉಡುಪಿ(reporterkarnataka.com):
ಉಚಿತವಾಗಿ ಮನೆಯಲ್ಲಿ ಇರಲು ವ್ಯವಸ್ಥೆ ಮಾಡಿದ ಮನೆ ಮಾಲೀಕನ ಬ್ಯಾಂಕ್ ಹಣ ಲಪಟಾಯಿಸಿ, ಮಾಲಿಕನ ಮನೆಯಲ್ಲೂ ಕಳ್ಳತನ ನಡೆಸಿದ ಘಟನೆ ಉಡುಪಿ ನಗರದ ಬನ್ನಂಜೆಯಲ್ಲಿ ನಡೆದಿದೆ.

ಇಲ್ಲಿನ ಮೂಡನಿಡಂಬೂರು ಗ್ರಾಮದ 79 ವರ್ಷದ ಎಂ .ಬಾಲಕೃಷ್ಣ ನಾಯಕ್ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸದ್ಯ ನಿವೃತ್ತ ಜೀವನ ನಡೆಸುತ್ತಿದ್ದರು. ಏಕಾಂಗಿಯಾಗಿ ವಾಸವಿದ್ದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿರುವ ಹಾವೇರಿಯ ರಮೇಶ್‌ ಮತ್ತು ಆತನ ಪತ್ನಿಗೆ ಮನೆಯಲ್ಲಿ ಉಚಿತ ರೂಮ್‌ ನೀಡಿ ವಾಸಕ್ಕೆ ವ್ಯವಸ್ಥೆ ಮಾಡಿದ್ದರು. ಮನೆ ಮಾಲೀಕ ಬಾಲಕೃಷ್ಣ ನಾಯಕ್ ಅವರ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ ಒಟಿಪಿ ಬಳಸಿಕೊಂಡು ಬೇರೆ ಬೇರೆ ದಿನಗಳಲ್ಲಿ ರಮೇಶ್ ವಿವಿಧ ಎಟಿಎಂಗಳಿಂದ ಒಟ್ಟು ರೂಪಾಯಿ 9,75,500/- ನ್ನು ಡ್ರಾ ಮಾಡಿ ವಂಚನೆ ಮಾಡಿದ್ದಾನೆ ಅಂತ ಬಾಲಕೃಷ್ಣ ನಾಯಕ್ ಅವರು ಆರೋಪಿಸಿದ್ದಾರೆ.

ಅಲ್ಲದೇ ಮನೆಯಲ್ಲಿದ್ದ 2 ಚಿನ್ನದ ಉಂಗುರಗಳು ಕಾಣೆಯಾಗಿದ್ದು, ಇವುಗಳನ್ನೂ ಸಹ ಆರೋಪಿತನು ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದಾಗಿ ಮನೆ ಮಾಲಿಕ ಬಾಲಕೃಷ್ಣ ಅವರು ದೂರು ನೀಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು