4:46 PM Saturday22 - March 2025
ಬ್ರೇಕಿಂಗ್ ನ್ಯೂಸ್
ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ,… ಹನಿಟ್ರ್ಯಾಪ್ ಪ್ರಕರಣ: ವಿಧಾನ ಸಭೆಯಲ್ಲಿ ಬಿಜೆಪಿ- ಜೆಡಿಎಸ್ ನಿಂದ ಭಾರೀ ಪ್ರತಿಭಟನೆ; ಸ್ಫೀಕರ್… ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ… ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ… ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ… Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ… ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ… Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ…

ಇತ್ತೀಚಿನ ಸುದ್ದಿ

ಬೆಂಗಳೂರು ವರ್ತುಲ ರಸ್ತೆ ಯೋಜನೆಗೆ (STRR) ಕೇಂದ್ರ ಸಂಪುಟ ಶೀಘ್ರವೇ ಒಪ್ಪಿಗೆ: ರಾಜಧಾನಿಯ ಸಂಚಾರ ದಟ್ಟಣೆ ತಗ್ಗಿಸಲು ರಾಮಬಾಣ

20/03/2025, 18:59

*ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರ ಭರವಸೆ ಕೊಟ್ಟ ಸಚಿವ ನಿತಿನ್ ಗಡ್ಕರಿ*

*ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿಯಿಂದ ಯೋಜನೆಗೆ ಅಸ್ತು*

*ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ*

ನವದೆಹಲಿ(reporterkarnataka.com): ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಂಪುಟ ಸಭೆಯ ಮುಂದೆ ಬರಲಿದೆ. ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ ಒಪ್ಪಿಗೆ ನೀಡಿದೆ.
ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದರು.
ನವದೆಹಲಿಯಲ್ಲಿ ಗುರುವಾರ ನಿತಿನ್ ಗಡ್ಕರಿ ಅವರನ್ನು ಅವರ ಸಂಸತ್ ಭವನದ ಕಚೇರಿಯಲ್ಲಿ ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು; ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು.
ಈ ಹಿಂದೆ ಗಡ್ಕರಿಯವರನ್ನು ಸಚಿವರು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee – PPPAC) ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂದು ಅವರು ಹೆಚ್ಡಿಕೆಗೆ ತಿಳಿಸಿದರು.
ಗಡ್ಕರಿ ಅವರ ಸಕರಾತ್ಮಕ ಸ್ಪಂದನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು ಎಂದು ಹೇಳಿದರು.
4- 6 ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.


ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ.

- ಎಚ್.ಡಿ.ಕುಮಾರಸ್ವಾಮಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು

ಇತ್ತೀಚಿನ ಸುದ್ದಿ

ಜಾಹೀರಾತು