2:30 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ ಸಚಿವ ಜೋಶಿ ಟೀಕೆ

29/05/2026, 08:51

ಮಂಗಳೂರು(reporterkarnataka com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಅವರ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಹ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷ ನೆಪಕ್ಕಷ್ಟೇ ಒಬಿಸಿ ಜಪ ಮಾಡುತ್ತದೆ. ಆದರೆ, ನಡೆದುಕೊಳ್ಳುವ ರೀತಿಯೇ ಬೇರೆ. ಒಬಿಸಿ ವರ್ಗದವರನ್ನು ಯಾವತ್ತೂ ಕಡೆಗಣಿಸುತ್ತಲೇ ಇದೆ ಎಂದು ಕಿಡಿಕಾರಿದರು.
ಇದನ್ನೂ ನೋಡಿ: ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

*ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ:*
ಅಪ್ಪ ರಾಜೀವ್ ಗಾಂಧಿ ಅಂದು ವೀರೇಂದ್ರ ಪಾಟೀಲರನ್ನು ನಡೆಸಿಕೊಂಡಂತೆ ಮಗ ರಾಹುಲ್ ಗಾಂಧಿ ಇಂದು ಸಿದ್ದರಾಮಯ್ಯ ಅವರನ್ನು ನಡೆಸಿಕೊಂಡಿದ್ದಾರೆ. ರಾಜೀವ್ ಗಾಂಧಿ ವೀರೇಂದ್ರ ಪಾಟೀಲರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಅಪಮಾನಿಸಿದ್ದರು. ಅಂತೆಯೇ ಮಗ ರಾಹುಲ್ ಗಾಂಧಿ ಸಹ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಅವಮಾನಿಸಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ಆರ್ಥಿಕತೆ ಹದಗೆಡಿಸಿ, ಹೈ ಕಮಾಂಡ್ ಗೆ ATM ಆಗಿದ್ರು
ಅರಾಜಕತೆ, ಅಸ್ಥಿರತೆ, ಅವಿಶ್ವಾಸ, ಗೊಂದಲದ ವಾತಾವರಣವೇ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ. ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಆಂತರಿಕ ಗೊಂದಲ, ಅರಾಜಕತೆ, ಅಸ್ಥಿರತೆ ಪರಾಕಾಷ್ಠೆ ತಲೆದೋರಿದೆ. ಕಾಂಗ್ರೆಸ್ ಒಂದು ಅರಾಜಕತೆಯ ಪಕ್ಷ . ಸಿದ್ದರಾಮಯ್ಯ ಅವರು ವಿದಾಯ ಭಾಷಣದಲ್ಲಿ ರಾಜ್ಯದ ಸಂಪತ್ತು ‌ಬರಿದಾಗಿದ್ದನ್ನು ಪ್ರಸ್ತಾಪಿಸುತ್ತ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದ ಜೋಶಿ, ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳು ಮತ್ತು ಹೈಕಮಾಂಡ್ ಅನ್ನು ತೃಪ್ತಿಪಡಿಸಲು ಹೋಗಿ ರಾಜ್ಯದ ಆರ್ಥಿಕತೆಯನ್ನು ಹದಗೆಡಿಸಿದರು ಎಂದು ತಿರುಗೇಟು ನೀಡಿದರು.
ರಾಜ್ಯದಲ್ಲಿ ಬಹುತೇಕ ವಸ್ತುಗಳ ಬೆಲೆ ಏರಿಸಿ ಆರ್ಥಿಕತೆಯನ್ನು ತೂಗಿಸಲು ಸರ್ಕಸ್ ಮಾಡಿದ ಸಿದ್ದರಾಮಯ್ಯ ಅವರು, ಅಭಾವವಿಲ್ಲದ ಸಮಯದಲ್ಲೂ ಮೂರು ಬಾರಿ ಇಂಧನದ ಬೆಲೆ ಏರಿಸಿ ಜನಜೀವನ ದುಬಾರಿ ಮಾಡಿದರೆ, ಕಾಂಗ್ರೆಡ್ ಹೈ ಕಮಾಂಡ್, ರಾಹುಲ್ ಗಾಂಧಿ ಸಿದ್ದರಾಮಯ್ಯರನ್ನು ATM ರೀತಿ ಬಳಸಿಕೊಂಡಿತು ಎಂದು ದೂರಿದರು.
ವಿಬಿಜಿ ರಾಮ್ ಜಿ, ಜಲಜೀವನ ಮಿಷನ್, 15ನೇ ಹಣಕಾಸು ಆರ್ಥಿಕ ನೆರವು, ಜಿ ಎಸ್ ಟಿ ಸೇರಿದಂತೆ ಕೇಂದ್ರ ಸರ್ಕಾರದ ಆರ್ಥಿಕ ನೆರವುಗಳ ಬಗ್ಗೆ ಕೂಲಕುಂಶ ಮಾಹಿತಿ ನೀಡಿದ್ದಲ್ಲದೆ, ಹಣ ಬಿಡುಗಡೆ ಆಗಿರುವ ಬಗ್ಗೆ ಹಲವು ಬಾರಿ ಕೇಂದ್ರ ಸ್ಪಷ್ಟಪಡಿಸಿದೆ. ಹಾಗಿದ್ದರೂ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು