5:28 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಿವೇಶನ ವಾಪಸ್ ಪಡೆಯದಿದ್ದರೆ ಬಿಜೆಪಿಯಿಂದ ಬೃಹತ್ ಹೋರಾಟ: ಕೇಂದ್ರ ಸಚಿವ ಜೋಶಿ ಎಚ್ಚರಿಕೆ

18/02/2026, 20:12

ನವದೆಹಲಿ(reporterkarnataka.com): ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ 24ಕ್ಕೂ ಹೆಚ್ಚು ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಬಳಸಲು ಅದೇನು ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೆಂಡ ಕಾರಿದ್ದಾರೆ.
ರಾಜ್ಯದಲ್ಲಿ ನಾಗರಿಕ ಸೌಲಭ್ಯದ(CA) ನಿವೇಶನಗಳನ್ನು ಕಡಿಮೆ ಬೆಲೆಗೆ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಎಂದು ಕಿಡಿ ಕಾರಿದ್ದಾರೆ.
ಸಾರ್ವಜನಿಕ ಉದ್ಯಾನವನ, ಗ್ರಂಥಾಲಯ, ಆಸ್ಪತ್ರೆಗಳಿಗೆ ಬಳಕೆ ಆಗಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ‘ಕಾಂಗ್ರೆಸ್ ಭವನ’ಗಳಿಗೆ ಮೀಸಲಿಟ್ಟಿರುವುದು ರಾಜ್ಯದ ಜನತೆಗೆ ಮಾಡಿದ ದ್ರೋಹ ಎಂದು ಖಂಡಿಸಿದ್ದಾರೆ.
ಒಂದೆಡೆ ಬಡವರಿಗೆ ನಿವೇಶನ ನೀಡಲು ಜಾಗವಿಲ್ಲ ಎನ್ನುವ ಈ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ತನ್ನ ಪಕ್ಷದ ಕಚೇರಿಗಳಿಗೆ ಬಳಸಿಕೊಳ್ಳುತ್ತಿದೆ. ಈ ಮೂಲಕ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಾರ್ವಜನಿಕ ಆಸ್ತಿಯನ್ನು ಕಾಂಗ್ರೆಸ್ ಪಕ್ಷ ತನ್ನ ಪಿತ್ರಾರ್ಜಿತ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದೆ. ಬಡವರ ಹಿತ ಕಾಯುವ ಬದಲು ಕಾಂಗ್ರೆಸ್‌ ತನ್ನ ‘ಪಕ್ಷದ ಹಿತ’ಕ್ಕೆ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

*ನಿವೇಶನ ವಾಪಸ್ಗೆ ಆಗ್ರಹ:* ಲೂಟಿ ಹೊಡೆಯುವುದೇ ಕಾಂಗ್ರೆಸ್‌ನ ಮೂಲ ಸಿದ್ಧಾಂತ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿರುವ ಜೋಶಿ, ಪಕ್ಷದ ಕಚೇರಿಗಳಿಗೆ ಮಾಡಿರುವ ಈ ಅಕ್ರಮ ಹಂಚಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

*ಬಿಜೆಪಿಯಿಂದ ಬೃಹತ್ ಹೋರಾಟ:*
ರಾಜ್ಯ ಕಾಂಗ್ರೆಸ್ ಸರ್ಕಾರ ಇದನ್ನು ವಾಪಸ್ ಪಡೆಯದಿದ್ದರೆ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು