6:25 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು