ಇತ್ತೀಚಿನ ಸುದ್ದಿ
ಯುನಿಸೆಕ್ಸ್ ಸೆಲೂನ್ ದಾಳಿಕೋರರ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ: ಉಡುಪಿಯಲ್ಲಿ ಗೃಹ ಸಚಿವ ಡಾ. ಪರಮೇಶ್ವರ್
23/01/2025, 22:24
ಉಡುಪಿ(reporterkarnataka.com): ಮಂಗಳೂರಿನ ಯುನಿಸೆಕ್ಸ್ ಸೆಲೂನಿನ ಮೇಲೆ ನಡೆದ ದಾಳಿ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಉಡುಪಿಯಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ಇಂತಹ ಕೃತ್ಯಗಳು ನಡೆಯಬಾರದು. ಕಾನೂನು ಪ್ರಕಾರ ಅವರ ವಿರುದ್ಧ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಯಾವ ಉದ್ದೇಶಕ್ಕೆ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇಲ್ಲ. ಪ್ರತಿಯೊಬ್ಬರಿಗೂ ಕೆಲಸ ಮಾಡುವ ಹಕ್ಕಿದೆ. ಯಾರ ವ್ಯಾಪಾರಕ್ಕೂ ಅಡ್ಡಿ ಮಾಡಬಾರದು. ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರೆ, ಪೊಲೀಸರಿಗೆ ದೂರು ನೀಡಲಿ. ಅದರ ಬದಲಿಗೆ ದಾಳಿ ನಡೆಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ನುಡಿದರು.