ಇತ್ತೀಚಿನ ಸುದ್ದಿ
ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ
18/07/2025, 19:25

ಗದಗ(reporterkarnataka.com): ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಯಾರಿಗೆ ನ್ಯಾಯ ಕೊಟ್ಟರು ಯಾರಿಗೂ ಗೊತ್ತಿಲ್ಲ. ಅವರ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ ಕೊಟ್ಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಹಿಂದುಳಿದ ವರ್ಗಗಳ ಸಮಿತಿಯಿಂದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಬಿರುದು ಕೊಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ಯಾರಿಗೆ ನ್ಯಾಯ ಕೊಟ್ಟರು ಯಾರಿಗೂ ಗೊತ್ತಿಲ್ಲ. ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ ಕೊಟ್ಟಿದ್ದಾರೆ. ಅವರಿಗೆ ಶುಭವಾಗಲಿ ಎಂದರು.
ಏರೋ ಸ್ಪೇಸ್ ಉದ್ಯಮಕ್ಕೆ ಆಂಧ್ರಪ್ರದೇಶ ಸರ್ಕಾರ ಆಹ್ವಾನದ ಕುರಿತು ಕೇಳಿದ ಪ್ರಶ್ನೆಗೆ ಏರೋಸ್ಪೇಸ್ ಟೆಕ್ನಾಲಜಿ ಕಳೆದ ಆರೇಳು ದಶಕದಿಂದ ಕರ್ನಾಟದಲ್ಲಿದೆ. ಕರ್ನಾಟಕ ಬಿಟ್ಟು ಏರೋಸ್ಪೇಸ್ ಟೆಕ್ನಾಲಜಿ ಉದ್ಯಮ ಹೋಗುವುದಿಲ್ಲ ಎಂದರು
ಮಾಜಿ ಸಚಿವರಾದ ಬಿ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿಯವರನ್ನು ಒಂದು ಮಾಡಲಾಗುತ್ತಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಒಂದು ಮಾಡುವ ಅಗತ್ಯ ಇಲ್ಲ. ಅವರು ಮೊದಲಿನಿಂದಲೂ ಒಂದೇ ಇದ್ದಾರೆ ಎಂದು ಹೇಳಿದರು.