3:09 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ

29/08/2021, 11:23

ಮಂಗಳೂರು (reporterkarnataka.com): ಉನ್ನತ ಶಿಕ್ಷಣ,  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

30ರ ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ 10.50ಕ್ಕೆ ದಕ್ಷಿಣ ಕನ್ನಡ ವಿಮಾನನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11ಗಂಟೆಗೆ ಅಲ್ಲಿಂದ ಹೊರಟು 11.45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಆಗಮಿಸುವರು. 12 ರಿಂದ 1.30 ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ರಿಂದ 3 ಗಂಟೆಯವರೆಗೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ 3.45 ರವರೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು.  ಸಂಜೆ 4 ಗಂಟೆಗೆ ಮುಡುಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಮ ಪಂಚಾಯಿತಿ ಭೇಟಿ ನೀಡುವರು. ಸಂಜೆ 4.30ಕ್ಕೆ ಆರೆಸ್ಸೆಸ್ ಕಚೇರಿಗೆ ಪ್ರಯಾಣಿಸುವರು. ಸಂಜೆ 4.45 ರಿಂದ 5.15ರವರೆಗೆ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವರು.  ಸಂಜೆ  5.15ರಿಂದ 5.45 ರವರೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 5. 45ಕ್ಕೆ ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿ 6.55 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು