12:41 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪಿಯು ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಜಯಭೇರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ

10/04/2026, 00:14

ಬೆಂಗಳೂರು(reporterkarnataka.com): ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, “ಪರೀಕ್ಷೆ ಬರೆದ 6,32,200 ವಿದ್ಯಾರ್ಥಿಗಳಲ್ಲಿ 5,46,698 ಮಕ್ಕಳು ತೇರ್ಗಡೆಯಾಗಿದ್ದಾರೆ. ಇದು ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲಾದ ಗರಿಷ್ಠ ಫಲಿತಾಂಶ,” ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮುಂಚೂಣಿಯಲ್ಲಿದ್ದಾರೆ.
ಬಾಲಕಿಯರು: ಶೇ. 88.70 (3,13,770 ವಿದ್ಯಾರ್ಥಿನಿಯರು)
ಬಾಲಕರು: ಶೇ. 83.65 (2,32,928 ವಿದ್ಯಾರ್ಥಿಗಳು)

*ವಿಭಾಗವಾರು ಸಾಧನೆ:*

ವಿಜ್ಞಾನ ವಿಭಾಗ: 2,66,071 ವಿದ್ಯಾರ್ಥಿಗಳು (ಶೇ. 86.48)

ವಾಣಿಜ್ಯ ವಿಭಾಗ: 1,82,317 ವಿದ್ಯಾರ್ಥಿಗಳು (ಶೇ. 88.04)

ಕಲಾ ವಿಭಾಗ: 98,310 ವಿದ್ಯಾರ್ಥಿಗಳು (ಶೇ. 72.86)

ವಿಶೇಷವೆಂದರೆ, ನಗರ ಪ್ರದೇಶಕ್ಕಿಂತ (ಶೇ. 85.95) ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ (ಶೇ. 87.62) ಹೆಚ್ಚು ಸಾಧನೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

*ಶ್ರೇಣಿವಾರು ವಿವರ:*
ಉನ್ನತ ಶ್ರೇಣಿ: 1,70,529 ಮಕ್ಕಳು

ಪ್ರಥಮ ದರ್ಜೆ: 2,95,385 ಮಕ್ಕಳು

ದ್ವಿತೀಯ ದರ್ಜೆ: 63,957 ಮಕ್ಕಳು

ಸುಮಾರು 5,577 ವಿದ್ಯಾರ್ಥಿಗಳಿಗೆ ಶೇ. 35 ರಿಂದ 33 ರವರೆಗೆ ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವೆಬ್‌ಸೈಟ್ ಹಾಗೂ ಡಿಜಿ ಲಾಕರ್‌ನಲ್ಲಿ ಇಂದೇ ಅಂಕಪಟ್ಟಿಗಳು ಲಭ್ಯವಾಗುವಂತೆ ಮಾಡಲಾಗಿದೆ. ಇಂತಹ ಅದ್ಭುತ ಸಾಧನೆ ಮಾಡಿದ ರಾಜ್ಯದ ಸಮಸ್ತ ವಿದ್ಯಾರ್ಥಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು